ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗಿಲ್ಲ ಎಂದು ಮಾಜಿ ಸಿಎಂ ( BSY) ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾ ಸಿಎಂ ಯಡಿಯೂರಪ್ಪ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗಿಲ್ಲ ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರ ಆಕ್ಷೇಪ ಅಂತಾ ಏನೂ ಇಲ್ಲ. ನರೇಂದ್ರ ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಈ ಬಗ್ಗೆ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ಕಾದು ನೋಡಬೇಕು ಎಂದು ಯಡಿಯೂರಪ್ಪ ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕೇಂದ್ರ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ. ಪ್ರಾಥಮಿಕ ಹಂತದಲ್ಲಿದೆ, ಮುಂದಿನ ದಿನಗಳಲ್ಲಿ ವರಿಷ್ಠರು ಈ ಬಗ್ಗೆ ಚರ್ಚಿಸ್ತಾರೆ ಎಂದರು.