ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಲಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ.
ಡಿಸೆಂಬರ್ 4 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ರೇವತಿ ಮೃತಪಟ್ಟಿದ್ದರು. 8 ವರ್ಷದ ಪುತ್ರ ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.