ದಕ್ಷಿಣ ಭಾರತದಲ್ಲಿ ದೊಡ್ಡ ಹೆಸರು ಮಾಡಿದ್ದ ಅಲ್ಲು ಅರ್ಜುನ್ ‘ಪುಷ್ಪ’ ಚಿತ್ರದ ಬಳಿಕ ಭಾರತದಾದ್ಯಂತ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದರ ಮುಂದುವರೆದ ಭಾಗ ‘ಪುಷ್ಪ 2’ ನಾಳೆ ತೆರೆ ಮೇಲೆ ಬರಲಿದ್ದು, ಅವರ ಅಭಿಮಾನಿಗಳು ಹಬ್ಬದಂತೆ ಆಚರಿಸಲು ಸಜ್ಜಾಗಿದ್ದಾರೆ.
ಸುಕುಮಾರ್ ನಿರ್ದೇಶನದ ಆಕ್ಷನ್ ಡ್ರಾಮಾ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ಫಹಾದ್ ಫಾಸಿಲ್, ಜಗಪತಿ ಬಾಬು, ಪ್ರಕಾಶ್ ರಾಜ್, ಸುನಿಲ್, ಅನಸೂಯಾ ಭಾರದ್ವಾಜ್, ರಾವ್ ರಮೇಶ್, ಅಜಯ್ ಘೋಷ್, ಧನಂಜಯ, ಆದಿತ್ಯ ಮೆನನ್, ಬ್ರಹ್ಮಾಜಿ, ದಯಾನಂದ ರೆಡ್ಡಿ, ಉಳಿದ ಪಾತ್ರ ವರ್ಗದಲ್ಲಿದ್ದಾರೆ.
ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದು, ನವೀನ್ ನೂಲಿ ಸಂಕಲನ, ಮಿರೋಸ್ಲಾವ್ ಕುಬಾ ಬ್ರೋಜೆಕ್ ಛಾಯಾಗ್ರಹಣವಿದೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ನವೀನ್ ಯೆರ್ನೇನಿ, ಲಮಂಚಿಲಿ ರವಿಶಂಕರ್ ನಿರ್ಮಾಣ ಮಾಡಿದ್ದಾರೆ.