
ಹೈದರಾಬಾದ್: ಜಾಮೀನು ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಅವರು ಹೈದರಾಬಾದ್ ಕೇಂದ್ರ ಕಾರಾಗೃಹದಲ್ಲಿ ರಾತ್ರಿ ಕಳೆದಿದ್ದಾರೆ.
ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಅಭಿಮಾನಿ ಸಾವಿನ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ, ಬಿಡುಗಡೆ ಪ್ರಕ್ರಿಯೆ ವಿಳಂಬವಾಗಿದ್ದರಿಂದ ಶುಕ್ರವಾರ ರಾತ್ರಿ ಜೈಲಿನಲ್ಲೇ ಇರುವಂತಾಗಿದೆ.
ಶುಕ್ರವಾರ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದರು.