ಬೆಳಗಾವಿ: ಮಾರಾಟಕ್ಕೆಂದು ಮೇವಿನ ಹೊಟ್ಟು ಐಶರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟಿಟಿ ವಾಹನ ಡಿಕ್ಕಿಯಾಗಿ ಮೂವರು ರೈತರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿರಸಂಗಿಯ ರೈತರಾದ ಹನುಮಂತಪ್ಪ ಮಲ್ಲಾಡ (45), ಮಹಾಂತೇಶ್ ಚೌವ್ಹಾಣ್ (40) ಮಹದೇವ ಹಾಲೊಳ್ಳಿ (40) ಮೃತರು. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋವಾದಲ್ಲಿ ಮೇವಿನ ಹೊಟ್ಟಿಗೆ ಹೆಚ್ಚಿನ ಬೇದಿಕೆ ಇದ್ದ ಹಿನ್ನೆಲೆಯಲ್ಲಿ ಹೊಟ್ಟು ಮಾರಾಟಕ್ಕಾಗಿ ಮೇವಿನ ಹೊಟ್ಟನ್ನು ತುಂಬಿಕೊಂಡು ಗೋವಾದತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.