ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸಂಚಾರ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ಅವರನ್ನು ಶುಕ್ರವಾರ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.
ಡಿಜಿಪಿ ಡಾ. ಪಿ. ರವೀಂದ್ರನಾಥ್ ಅವರಿಂದ ತೆರವಾಗಲಿರುವ ಪೊಲೀಸ್ ತರಬೇತಿ ವಿಭಾಗಕ್ಕೆ ಅಲೋಕ್ ಕುಮಾರ್ ಅವರನ್ನು ಸರ್ಕಾರ ನಿಯೋಜಿಸಿದೆ.
ರಾಜ್ಯ ಪೊಲೀಸ್ ಗೃಹ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ. ರಾಮಚಂದ್ರರಾವ್ ಅವರಿಗೆ ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ. ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ. ಪಿ. ರವೀಂದ್ರನಾಥ್ ಶನಿವಾರ ನಿವೃತ್ತರಾಗಲಿದ್ದಾರೆ.