alex Certify BIG NEWS : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ‘ಅಲೋಕ್ ಮೋಹನ್’ ಮುಂದುವರಿಕೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ‘ಅಲೋಕ್ ಮೋಹನ್’ ಮುಂದುವರಿಕೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು.ಅವರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು, ಇದೀಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹಾಗೆಯೇ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿ ಸ್ಥಾನದಿಂದ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...