ಬೆಂಗಳೂರು : ಅತಿಥಿ ಉಪನ್ಯಾಸಕರು ನಾಳೆ (ಜ.1) ಕರ್ತವ್ಯಕ್ಕೆ ಗೈರಾದರೆ ಪರ್ಯಾಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸೇವೆ ಕಾಯಂಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪದವಿ ಕಾಲೇಜು ಅತಿಥಿ ಉಪನ್ಯಾಸಕರು ಜನವರಿ 1 ರಂದು ಕರ್ತವ್ಯಕ್ಕೆ ಮರಳದಿದ್ದರೆ ಪರ್ಯಾಯ ಕ್ರಮ ಕೈಗೊಳ್ಳುವುದಾಗಿ ಎಲ್ಲಾ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಎಲ್ಲಾ 430 ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಪತ್ರ ಬರೆದ ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ‘ನಾಳೆಯಿಂದ (ಜ.1) ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಿದ್ದಾರೆ. ಒಂದು ವೇಳೆ ಹಾಜರಾಗದೇ ಇದ್ದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ. ಹಾಗೂ ಉಪನ್ಯಾಸಕರು ಹಾಜರಾಗಿರುವ ಬಗ್ಗೆ ವೆಬ್ ಸೈಟ್ ನ ಗೂಗಲ್ ಫಾರ್ಮ್ ನಲ್ಲಿ ನಮೂದಿಸಬೇಕು’ ಎಂದು ಸೂಚನೆ ನೀಡಿದ್ದಾರೆ.