ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ (ಫೆಬ್ರವರಿ 5) ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
“ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಬದ್ಧತೆಗೆ ಅನುಗುಣವಾಗಿ, ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಹೆಚ್ಚಿಸಲು ಪ್ರಧಾನಿ ನಿರಂತರವಾಗಿ ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದಾರೆ” ಎಂದು ಪ್ರಧಾನಿ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.
ಸಮಗ್ರ ಕಣ್ಣಿನ ಆರೈಕೆ ಸೇವೆಗಳನ್ನು ಒದಗಿಸುವತ್ತ ಗಮನ ಹರಿಸುವ ಆರ್ಎಸ್ಎಸ್ ಅಂಗಸಂಸ್ಥೆಗಳ ಉಪಕ್ರಮವಾದ ನೇತ್ರ ಕುಂಭಕ್ಕೂ ಪ್ರಧಾನಿ ಭೇಟಿ ನೀಡುವ ನಿರೀಕ್ಷೆಯಿದೆ.ಈ ಅಭಿಯಾನವು ಉಚಿತ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆ, ಶಸ್ತ್ರಚಿಕಿತ್ಸೆಗಳು ಮತ್ತು ಕಣ್ಣಿನ ಆರೈಕೆ ಮತ್ತು ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವುದನ್ನು ಒಳಗೊಂಡಿದೆ.