ರಾಯಚೂರು: ಅಂಬೇಡ್ಕರ್ ವಸತಿ ಶಾಲೆಯ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ಅರೆಬೆಂದ ಊಟ ಸೇವಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೇ ವಿದ್ಯಾರ್ಥಿನಿಯರು 2 ಗಂಟೆಕಾಲ ನರಳಾಡುವ ಸ್ಥಿತಿ ಎದುರಾಯಿತು.
ವಸತಿ ಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ವಿದ್ಯಾರ್ಥಿನಿಯರು ಅರೆಬೆಂದ ಊಟ ಸೇವಿಸಿದ್ದರು. ಇದೀಗ ವಿದ್ಯಾರ್ಥಿನಿಯರು ಅಸ್ವಸ್ಥರಾಗುತ್ತಿದ್ದಂತೆ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಂಬೇಡ್ಕರ್ ವಸತಿ ಶಾಲೆಯಲ್ಲಿ ಊಟದ ವ್ಯವಸ್ಥೆ ಸರಿಇಲ್ಲ ಎಂದು ಈ ಹಿಂದೆಯೂ ಮಕ್ಕಳು ದೂರಿದ್ದರು.