ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಸೇರಿದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವುದನ್ನು ಕಡ್ಡಾಯಗೊಳಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.