alex Certify ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 20 ಕೆಜಿ ಅಂಬರ್ ಗ್ರೀಸ್ ಜಪ್ತಿ, ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 20 ಕೆಜಿ ಅಂಬರ್ ಗ್ರೀಸ್ ಜಪ್ತಿ, ನಾಲ್ವರು ಅರೆಸ್ಟ್

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು ಬರೋಬ್ಬರಿ 20 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ.

ಎಸ್.ಜೆ. ಪಾರ್ಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಎನ್.ಆರ್. ರಸ್ತೆಯ ಲೂಸಿಯಾ ಲಾಡ್ಜಿನಲ್ಲಿ 2.5 ಕೆಜಿ ಅಂಬರ್ ಗ್ರೀಸ್ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅದೇ ರೀತಿ ಅಂಬರ್ ಗ್ರೀಸ್ ಮಾರಾಟ ಮಾಡಲು ಬಂದಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ. 17.5 ಕೆಜಿ ಅಂಬರ್ ಗ್ರೀಸ್ ವಶಕ್ಕೆ ಪಡೆಯಲಾಗಿದೆ.

ಹೀಗೆ ಒಟ್ಟು 20 ಕೆಜಿ ಅಂಬರ್ ಗ್ರೀಸ್ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿ, 4 ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...