alex Certify 3.48 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ, 6 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3.48 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ, 6 ಮಂದಿ ಅರೆಸ್ಟ್

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಠಾಣಾ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ಬಳಿ ಅಂಬರ್ ಗ್ರೀಸ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕುಂದಾಪುರದ ಪ್ರಶಾಂತ್, ಬೆಂಗಳೂರಿನ ಸತ್ಯರಾಜ್ ಹಾಗೂ ಸ್ಥಳೀಯರಾದ ರೋಹಿತ್, ರಾಜೇಶ್ ವಿರೂಪಾಕ್ಷ, ನಾಗರಾಜ್ ಎಂಬವರನ್ನು ಬಂಧಿಸಲಾಗಿದೆ. ಬಂಧಿತರಿಂದ 3.48 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆಯಲಾಗಿದೆ. ತಮಿಳುನಾಡಿನ ಮೀನುಗಾರರಿಂದ ಇದನ್ನು ಪಡೆದುಕೊಂಡು ಸಾಗಿಸುತ್ತಿದ್ದರು. ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...