
ಮಂಗಳೂರು: ಮಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಪ್ಯಾರೇಜಾನ್, ಬದ್ರುದ್ದೀನ್, ತಮಿಳುನಾಡಿನ ಆರ್. ರಾಜೇಶ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 1.57 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಂಪ್ವೆಲ್ ಸಮೀಪ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ವೇಳೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗಿದೆ.