
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ತಂದೆ ಶಾಮನೂರು ಶಿವಶಂಕರಪ್ಪ, ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಪುತ್ರ ಸಮರ್ಥ್, ಪುತ್ರಿ ಶ್ರೇಷ್ಠ ಮೊದಲಾದವರ ಸಮ್ಮುಖದಲ್ಲಿ ಆಚರಣೆ ಮಾಡಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ದಾವಣಗೆರೆಗೆ ತೆರಳಿ ತಮ್ಮ ತಂದೆಯವರ ಆತ್ಮೀಯ ಸ್ನೇಹಿತರಾದ ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.
ಈ ಸಂದರ್ಭದಲ್ಲಿ ಅಭಿಷೇಕ್ ಅವರೊಂದಿಗೆ ಶಾಸಕ ವೀರೇಂದ್ರ ಮೊದಲಾದವರು ಹಾಜರಿದ್ದರು. ಸಚಿವ ಮಲ್ಲಿಕಾರ್ಜುನ್ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದು, ‘ನನ್ನ ಜನ್ಮದಿನದ ಪ್ರಯುಕ್ತ ನನ್ನ ಆತ್ಮೀಯ ಸ್ನೇಹಿತ ದಿವಂಗತ ಅಂಬರೀಶ್ ಅವರ ಪುತ್ರ ಅಭಿಷೇಕ್ ಅವರು ಇಂದು ದಾವಣಗೆರೆಯಲ್ಲಿರುವ ನನ್ನ ಗೃಹ ಕಚೇರಿಗೆ ಆಗಮಿಸಿ ಶುಭ ಕೋರಿದರು’ ಎಂದು ಹೇಳಿದ್ದಾರೆ.