
ಉಡುಪಿ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ.
ವೇಗವಾಗಿ ಬಂದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ್ದು, ಔಷಧಾಲಯ ಮುಚ್ಚಿದ್ದರಿಂದ ಅನಾಹುತ ತಪ್ಪಿದೆ. ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ.
ಆಂಬುಲೆನ್ಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.