ಚಿಕ್ಕಮಗಳೂರು: ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರವೀಣ್(30) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನೆಲವಾಗಿಲು ಗ್ರಾಮದ ಬಳಿ ಅಪಘಾತ ನಡೆದಿದೆ. ಮೃತ ಪ್ರವೀಣ್ ಹೊಸನಗರ ತಾಲೂಕಿನ ಸೋನಲೆ ಗ್ರಾಮದ ನಿವಾಸಿಯಾಗಿದ್ದಾರೆ. ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.