ಹಾಸನ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಇಬ್ಬೀಡು ಗ್ರಾಮದ ಆನಂದ್ (30) ಮೃತ ಯುವಕ. ಅಪಘಾತದಿಂದ ಆನಂದ್ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿಲ್ಲ.
ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಾರದೇ ಗಂಭೀರವಾಗಿ ಗಾಯಗೊಂಡಿದ್ದ ಯುವಕ ನರಳಾಡಿ ರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದಾನೆ. ಘಟನೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.