alex Certify ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಮಗಳೂರು: ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.

ಸುಲ್ತಾನ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಅಸ್ಸಾಂ ಮೂಲದ ಅವರು ಕೂಲಿ ಕೆಲಸಕ್ಕಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಬಂದಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಾಗಿದ್ದ ಪರ್ವೀನ್ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಂಬುಲೆನ್ಸ್ ನಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಸ್ಪತ್ರೆ ತಲುಪುವ ಮೊದಲೇ ಮಾರ್ಗಮಧ್ಯದಲ್ಲಿ ಹೆರಿಗೆಯಾಗಿದೆ. ಆಂಬುಲೆನ್ಸ್ ಚಾಲಕ ಆರೀಫ್ ಹಾಗೂ ಮಹಿಳೆಯ ಸಂಬಂಧಿ ಸೇರಿ ಹೆರಿಗೆ ಮಾಡಿಸಿದ್ದಾರೆ. ತಾಯಿಮ ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನಗಳಲ್ಲಿ ಆಂಬುಲೆನ್ಸ್ ನಲ್ಲಿ ಹೆರಿಗೆಯಾದ ಮೂರನೇ ಪ್ರಕರಣ ಇದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...