ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂರಿಗೆ ಎರಡು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.
108 ಆಂಬ್ಯುಲೆನ್ಸ್ ಗಳ ನಿರ್ವಹಣೆ ಹೊಣೆ ಹೊತ್ತಿರುವ ಜಿವಿಕೆ ಸಂಸ್ಥೆಯು ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲಕ್ಕೆ ವೇತನ ಪಾವತಿಸುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದು, ನವೆಂಬರ್ 16ರೊಳಗೆ ಸಂಬಳ ನೀಡದಿದ್ದರೆ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಈ ಹಿನ್ನಲೆಯಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಎರಡು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.