
ತುಮಕೂರು: ರಾಜ್ಯಾದ್ಯಂತ 108 ಆಂಬುಲೆನ್ಸ್ ವ್ಯವಸ್ಥೆ ಸರಿಪಡಿಸಲು ಈ ಬಾರಿ ಬಜೆಟ್ ನಲ್ಲಿ ಮೇಜರ್ ಸರ್ಜರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 108 ಆಂಬುಲೆನ್ಸ್ ವ್ಯವಸ್ಥೆಗೆ ಹೊಸ ರೂಪ ನೀಡಲಾಗುವುದು. ಈ ಬಾರಿಯ ಬಜೆಟ್ ನಲ್ಲಿ ಅದನ್ನು ಪ್ರಕಟಿಸಲಿದ್ದು, ಮುಂದಿನ ದಿನಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಾಣಂತಿ, ಮಗು ಸಾವಿನ ಸಂಖ್ಯೆ ಪ್ರಕರಣ ಹೆಚ್ಚಿದ ಹಿನ್ನೆಲೆಯಲ್ಲಿ ಅನೇಕ ರೀತಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮುಂದೆ ಮತ್ತಷ್ಟು ಇಳಿಕೆಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.