ಬೆಂಗಳೂರು : ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾದಕ ವಸ್ತುಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಹಾವಳಿ ಹೆಚ್ಚಾಗಿದೆ. ನಿಯಂತ್ರಣಕ್ಕೆ ಈಗಾಗಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್ಪೋರ್ಸ್ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಯುವಜನರು ಮಾದಕವಸ್ತುಗಳ ಚಟಕ್ಕೆ ಬಲಿಯಾಗದಂತೆ ದಂಧೆಯನ್ನು ಸಂಪೂರ್ಣ ನಿಗ್ರಹಿಸುವುದೇ ಸರ್ಕಾರದ ಗುರಿ. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಬೇಕು. ಆರೋಗ್ಯಕ್ಕೆ ಮಾರಕವಾದ, ಜೀವಕ್ಕೆ ಕುತ್ತು ತರುವ ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ ಎಂದು ಯುವಜನತೆ ಪ್ರತಿಜ್ಞೆ ಮಾಡಬೇಕು. ಮಾಡಿದ ಪ್ರತಿಜ್ಞೆಯನ್ನು ಅಕ್ಷರಶಃ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.