alex Certify BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಮುಂಬಡ್ತಿ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಮುಂಬಡ್ತಿ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ..!

ಬೆಂಗಳೂರು : ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಮುಂಬಡ್ತಿಗೆ ಪರಿಗಣಿಸಲು ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಸುತ್ತೋಲೆಯಲ್ಲಿ..?

ಮುಂಬಡ್ತಿಯಲ್ಲಿ 5 ವರ್ಷಗಳ ಸೇವೆ ಸಲ್ಲಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಮುಂಬಡ್ತಿಗೆ ಪರಿಗಣಿಸಲು ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಗಳ ಕಲ್ಯಾಣ ಸಮಿತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೆಲವು ಸರ್ಕಾರಿ ಅಧಿಕಾರಿ/ ನೌಕರರುಗಳು ನಿಯಮಾನುಸಾರ ಮೀಸಲಾತಿಗೆ ನಿಗಧಿಪಡಿಸಿರುವ ಪ್ರಾತಿನಿಧ್ಯ ಮುಂಬಡ್ತಿಯಲ್ಲಿ ದೊರೆಯುವಂತೆ ಸದರಿ ಸಮಿತಿಗೆ ಮನವಿಗಳನ್ನು ಸಲ್ಲಿಸಿರುತ್ತಾರೆ.

ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಮುಂಬಡ್ತಿಗೆ ಪರಿಗಣಿಸಲು ಎಲ್ಲಾ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಸೂಚಿಸಲಾಗಿದೆ.

ಅದರಂತೆ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ ಇವರು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಗೆ ತಮ್ಮ ಅರೆ ಸರ್ಕಾರಿ ಪತ್ರ ಸಂಖ್ಯೆ: ಕವಿಸಸ/ ಅಜಾ-ಅಪ/04/ಅರ್ಜಿ/2024, ದಿನಾಂಕ:12-08-2024ರಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಕೃತ ಜ್ಞಾಪನ ಸಂಖ್ಯೆ: ಡಿಪಿಎಆರ್/126/ಎಸಿಆರ್/82, ದಿನಾಂಕ:26.11.1982 ರನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮುಂಬಡ್ತಿಯಲ್ಲಿ 5 ಅರ್ಹತಾದಾಯಕ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಕನಿಷ್ಟ 3 ವರ್ಷ ಸೇವೆ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಮುಂಬಡ್ತಿಗೆ ಪರಿಗಣಿಸುವ ಬಗ್ಗೆ ಯಾವ ಯಾವ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಈವರೆವಿಗೂ ಅಳವಡಿಸಿಕೊಂಡಿರುವುದಿಲ್ಲವೋ ಆ ಇಲಾಖೆಗಳಿಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸಮಿತಿಯ ನಿರ್ದೇಶನ ಮೇರೆಗೆ ಕ್ರಮವಹಿಸಲು ತಿಳಿಸಿರುತ್ತಾರೆ. ಅದರಂತೆ, ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಅದರ ಅಧೀನದಲ್ಲಿರುವ ಸರ್ಕಾರಿ ಸಂಸ್ಥೆಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕೃತ ಜ್ಞಾಪನ ಸಂಖ್ಯೆ: ಡಿಪಿಎಆರ್/126/ಎಸಿಆರ್/82, 2:26.11.1982 ರನ್ವಯ ಕ್ರಮವಹಿಸಬೇಕಾಗಿದೆ. ಸದರಿ ಜ್ಞಾಪನದ ವಿವರಗಳು ಈ ಕೆಳಕಂಡಂತೆ ಇದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...