ದೇಶದಲ್ಲೆಡೆ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆ ಇದ್ದು, ಐದು ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಶೀಘ್ರವೇ ಕೇಂದ್ರ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.
ಕೋವಿಡ್ ನಾಲ್ಕನೇ ಅಲೆ ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುವ ಸಂಭವವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ವಯೋಮಾನದ ಮಕ್ಕಳಿಗೆ ಶೀಘ್ರವೇ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.
BIG NEWS: ಮುಸ್ಲಿಂ ಜ್ಯುವೆಲ್ಲರಿ ಅಂಗಡಿಗಳಲ್ಲಿ ಚಿನ್ನ ಖರೀದಿಗೆ ನಿಷೇಧ; ಆರ್ಥಿಕತೆ ಭವಿಷ್ಯದ ಗತಿ ಏನು ? ಸಿಎಂ ಬೊಮ್ಮಾಯಿ ಏನ್ ಮಾಡ್ತಿದ್ದಾರೆ ? ಡಿಕೆಶಿ ಆಕ್ರೋಶ
12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈಗಾಗಲೇ ಲಸಿಕೆಯನ್ನು ನೀಡಲಾಗಿದ್ದು, 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶೀಘ್ರವೇ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.