ನವದೆಹಲಿ: ದೇಶದ ಈಶಾನ್ಯ ಭಾಗದ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಮ್ಯಾನ್ಮಾರ್ ನೊಂದಿಗಿನ ಮುಕ್ತ ಸಂಚಾರ ವ್ಯವಸ್ಥೆ ರದ್ದುಗೊಳಿಸಲು ಭಾರತದ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಚಲನೆ ಆಡಳಿತವನ್ನು (ಎಫ್ಎಂಆರ್) ರದ್ದುಗೊಳಿಸಲು ಗೃಹ ಸಚಿವಾಲಯ (ಎಂಎಚ್ಎ) ನಿರ್ಧರಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಅದನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ, ಎಫ್ಎಂಆರ್ ಅನ್ನು ತಕ್ಷಣವೇ ಅಮಾನತುಗೊಳಿಸಲು ಎಂಎಚ್ಎ ಶಿಫಾರಸು ಮಾಡಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.
ಇದಕ್ಕೂ ಮುನ್ನ ಮಂಗಳವಾರ (ಫೆಬ್ರವರಿ 6) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಡೀ 1643 ಕಿಲೋಮೀಟರ್ ಇಂಡೋ-ಮ್ಯಾನ್ಮಾರ್ ಗಡಿಯುದ್ದಕ್ಕೂ ಬೇಲಿ ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದರು.