ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರದ ಆಡಳಿತವೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ರಾಜ್ಯದಲ್ಲಿ ಮತ್ತೆ ಪೂರ್ಣಬಹುಮತದ ಬಿಜೆಪಿ ಸರ್ಕಾರ ಬರುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅವಧಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಕರ್ನಾಟಕಕ್ಕೆ ಪ್ರಧಾನಿ ಮೋದಿ ಅವರಿಂದಲೂ ಅನೇಕ ಯೋಜನೆಗಳು ಬಂದಿವೆ. ಆದ್ದರಿಂದ ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂಬ ಕನಸು ನನಸಾಗುವುದಿಲ್ಲ ಎಂದು ಕಾಂಗ್ರೆಸ್ ನವರ ಟೀಕೆಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.