alex Certify ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಸರ್ಕಾರ: ಅಮಿತ್ ಶಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಸರ್ಕಾರ: ಅಮಿತ್ ಶಾ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಸರ್ಕಾರ ರಚಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ರಾಜ್ಯ ಅಭಿವೃದ್ಧಿಯಾಗಿದೆ. ದೇಶಾದ್ಯಂತ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ರೂ. ಅನುದಾನ ಸೇರಿದಂತೆ ಕರ್ನಾಟಕದಲ್ಲಿ ಹಲವು ನೀರಾವರಿ ಯೋಜನೆ ಜಾರಿಗೊಳಿಸಿದ್ದೇವೆ. ಹಲವು ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಿದ್ದೇವೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದ್ದು, ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...