ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 15, 16 ರಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಅಮಿತ್ ಶಾ ಅವರು ಶಿವಮೊಗ್ಗ, ಬಳ್ಳಾರಿಗೆ ಭೇಟಿ ನೀಡಲಿದ್ದು, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಮ್ಮತಿಸಲಿದ್ದಾರೆ. ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಖಚಿತವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ವರಿಷ್ಠರಿಗೆ ರವಾನಿಸಿದ್ದಾರೆ. ಮೂವರು ವಲಸಿಗರು ಸೇರಿದಂತೆ 9 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಸಂಪುಟದಿಂದ ಕೆಲವರನ್ನು ಕೈಬಿಟ್ಟು ಪುನಾರಚನೆ ಮಾಡಲಾಗುವುದು ಎಂದು ಹೇಳಲಾಗಿದೆ.