ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದಲ್ಲಿ ತಮ್ಮ ನಿಗದಿತ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸಿದ್ದಾರೆ.
ಮಣಿಪುರದಲ್ಲಿ ಪರಿಸ್ಥಿತಿ ಅಸ್ಥಿರವಾಗಿರುವುದರಿಂದ ದೆಹಲಿಗೆ ಹಿಂತಿರುಗಿದ್ದಾರೆ. ಜಿರಿಬಾಮ್ ಜಿಲ್ಲೆಯಲ್ಲಿ ಇತ್ತೀಚೆಗೆ ಮೂವರು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಆರು ನಾಗರಿಕರ ಹತ್ಯೆಯಿಂದ ಹಿಂಸಾತ್ಮಕ ಪ್ರತಿಭಟನೆಗಳಿಗೆ ಇಂಫಾಲ್ ಕಣಿವೆ ಸಾಕ್ಷಿಯಾಗುತ್ತಿರುವುದರಿಂದ ಅಮಿತ್ ಶಾ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ.
ಶನಿವಾರ ರಾತ್ರಿ ಉಲ್ಬಣಗೊಂಡ ಹಿಂಸಾಚಾರದಲ್ಲಿ ಕೆರಳಿದ ಜನಸಮೂಹವು ಹಲವಾರು ರಾಜಕೀಯ ನಾಯಕರ ನಿವಾಸಗಳನ್ನು ಸುಟ್ಟುಹಾಕಿದೆ. ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಮೇಲ್ವಿಚಾರಣೆ ಮಾಡಲು ಅಮಿತ್ ಶಾ ದೆಹಲಿಗೆ ದೌಡಾಯಿಸಿದ್ದು, ಮಣಿಪುರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹಿಂಸಾಚಾರ ಘಟನೆಗಳ ಹಿನ್ನೆಲೆಯಲ್ಲಿ ಮಣಿಪುರ ರಾಜ್ಯದ ಕೆಲವು ಭಾಗಗಳಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಹೇರಲಾಗಿದೆ. ಪ್ರತಿಭಟನಾಕಾರರು ರಸ್ತೆಗಳನ್ನು ನಿರ್ಬಂಧಿಸಿದ್ದಾರೆ, ಟೈರ್‌ಗಳನ್ನು ಸುಟ್ಟುಹಾಕಿದ್ದಾರೆ.