alex Certify ಸಿಎಂ ಯಡಿಯೂರಪ್ಪರಿಗೆ ಅಮಿತ್ ಶಾ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪರಿಗೆ ಅಮಿತ್ ಶಾ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ನಂತರ ನಡೆಯಲಿರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯಡಿಯೂರಪ್ಪ ನೇತೃತ್ವದ ಸರ್ಕಾರ ಅಭಿವೃದ್ಧಿ ಪರವಾಗಿ, ಜನಪರವಾಗಿ ಕೆಲಸ ಮಾಡುತ್ತಿದೆ. ಸರ್ಕಾರ ಬದಲಾಗುತ್ತದೆ ಎನ್ನುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಂಡಿದೆ. ಮೂಲಸೌಲಭ್ಯ ಕೃಷಿ ಸೇರಿದಂತೆ ಎಲ್ಲ ವಲಯಗಳಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ನೆರವು ನೀಡುತ್ತಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...