ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರ ತಿರುಚಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.
ಅಮಿತ್ ಶಾ ಅವರ ವೀಡಿಯೊಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗಾಗಿ ಮೇ 1 ರಂದು ದೆಹಲಿ ಪೊಲೀಸರ ಐಎಫ್‌ಎಸ್‌ಒ ಘಟಕ(ಸೈಬರ್ ಘಟಕ) ಮುಂದೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಕ್ಸ್ ನಲ್ಲಿ ನಕಲಿ ವೀಡಿಯೊವನ್ನು ಪೋಸ್ಟ್ ಮಾಡಲು ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ನೊಂದಿಗೆ ಹಾಜರಾಗುವಂತೆ ರೆಡ್ಡಿ ಅವರಿಗೆ ತಿಳಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಮಿತ್ ಶಾ ರ ರ್ಯಾಲಿಯ ಟ್ಯಾಂಪರ್ಡ್ ವಿಡಿಯೋ ಕುರಿತು ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿದ ನಂತರ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ಒಂದು ದಿನದ ನಂತರ ಸಮನ್ಸ್ ಬಂದಿದೆ.
ವಿಶೇಷ ಕೋಶವು ಭಾರತೀಯ ದಂಡ ಸಂಹಿತೆಯ(ಐಪಿಸಿ) ವಿವಿಧ ಸೆಕ್ಷನ್‌ಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ.
ದೆಹಲಿ ಪೊಲೀಸರ ತನಿಖೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ರೇವಂತ್ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಗೆಲ್ಲಲು ದೆಹಲಿ ಪೊಲೀಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
“ಇಲ್ಲಿಯವರೆಗೆ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಚುನಾವಣೆ ಗೆಲ್ಲಲು ಇಡಿ, ಸಿಬಿಐ ಮತ್ತು ಆದಾಯ ತೆರಿಗೆಯನ್ನು ಬಳಸುತ್ತಿದ್ದರು. ಆದರೆ, ಇಂದು ದೆಹಲಿ ಪೊಲೀಸರು ತೆಲಂಗಾಣ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ತಲುಪಿದ್ದಾರೆ ಎಂದು ದೂರಿದ್ದಾರೆ.