ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಯಾರು ಹೊಣೆ? ಮಹಿಳೆಯರ ಪಾಲಿಗೆ ಕರ್ನಾಟಕ ರಾಜ್ಯ ಸುರಕ್ಷಿತವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಆತಂಕ ವಾದಕ್ಕೆ ಅಂತ್ಯ ಹಾಡಬೇಕೆಂದರೆ ಮೋದಿ ಮತ್ತೆ ಪ್ರಧಾನಿಯಾಗಬೇಕು. ಮೋದಿ ಪ್ರಧಾನಿಯಾಗಿದ್ದರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ವೋಟ್ ಬ್ಯಾಂಕ್ ದೂರವಾಗುತ್ತದೆ ಎಂದು ಕಾಂಗ್ರೆಸ್ ನವರು ರಾಮಮಂದಿರ ಪ್ರತಿಷ್ಠಾಪನೆ ಕಾರ್ಯಕ್ರಮದಿಂದ ದೂರ ಉಳಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ಬಾರದೆ ದೂರ ಉಳಿದಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬರದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪರಸ್ಪರ ಜಗಳವಾಡಿಕೊಂಡು ವರದಿಯನ್ನು ತಡವಾಗಿ ಕಳಿಸಿದರು. ಹಾಗಾಗಿ ಕರ್ನಾಟಕಕ್ಕೆ ಬರ ಪರಿಹಾರ ನೀಡುವುದು ವಿಳಂಬವಾಯಿತು ಎಂದು ತಿಳಿಸಿದ್ದಾರೆ.