alex Certify BREAKING: 11 ನಾಗರಿಕರ ಹತ್ಯೆ ಹಿನ್ನಲೆ, ಜಮ್ಮು ಕಾಶ್ಮೀರದಲ್ಲಿ ಅಮಿತ್ ಶಾ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 11 ನಾಗರಿಕರ ಹತ್ಯೆ ಹಿನ್ನಲೆ, ಜಮ್ಮು ಕಾಶ್ಮೀರದಲ್ಲಿ ಅಮಿತ್ ಶಾ ಮಹತ್ವದ ಸಭೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಭದ್ರತೆ ಕುರಿತಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸಭೆ ನಡೆಸಿದ್ದಾರೆ. ಶ್ರೀನಗರದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಎರಡು ವಾರದ ಅವಧಿಯಲ್ಲಿ 11 ಮಂದಿ ನಾಗರಿಕರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಉನ್ನತಮಟ್ಟದ ಭದ್ರತಾ ಸಭೆ ನಡೆಸಿದ್ದಾರೆ.

ಹೊರ ರಾಜ್ಯಗಳಿಂದ ಆಗಮಿಸಿ ಕಾಶ್ಮೀರದಲ್ಲಿ ನೆಲೆಸಿರುವ ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಹಾಗೂ ಸೇನಾಪಡೆಗಳ ಹಿರಿಯ ಅಧಿಕಾರಿಗಳೊಂದಿಗೆ ಅಮಿತ್ ಶಾ ಸಭೆ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಸೇನಾಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...