alex Certify ಕೇರಳದಲ್ಲಿಂದು ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ: ಬೊಮ್ಮಾಯಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಲ್ಲಿಂದು ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ: ಬೊಮ್ಮಾಯಿ ಭಾಗಿ

ತಿರುವನಂತಪುರಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ದಕ್ಷಿಣ ವಲಯ ಮಂಡಳಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದಕ್ಷಿಣ ಭಾರತದ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯಗಳ ನಡುವಿನ ನದಿ ನೀರಿನ ಹಂಚಿಕೆ ವಿವಾದ, ಸಂಪರ್ಕ, ಕಡಲ ತೀರದಲ್ಲಿ ಭದ್ರತೆ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ ದಕ್ಷಿಣ ವಲಯ ಮಂಡಳಿಯಲ್ಲಿ ಸೇರಿದ್ದು, ಈ ರಾಜ್ಯಗಳ ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು, ಕೇಂದ್ರ ಹಿರಿಯ ಅಧಿಕಾರಿಗಳು ಹಾಗೂ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...