
ಬೆಂಗಳೂರು: ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ನಿಧನರಾಗಿದ್ದಾರೆ. ಇದೇ ವೇಳೆ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಿಗದಿಯಂತೆ ಎಲ್ಲಾ ಕಾರ್ಯಕ್ರಮ ನಡೆಯಲಿವೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಇಂದು ಅಮಿತ್ ಶಾ ಮೆಗಾ ಡೇರಿ ಉದ್ಘಾಟಿಸಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮಾಹಿತಿ ನೀಡಿದ್ದಾರೆ
ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಿಗದಿಯಂತೆ ಮಂಡ್ಯದಲ್ಲಿ ಅಮಿತ್ ಶಾ ಸಮಾವೇಶ ನಡೆಯಲಿದೆ. ನಿನ್ನೆ ರಾತ್ರಿ ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ ಅವರು ಮೂರು ದಿನಗಳ ಪ್ರವಾಸದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.