ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.