ಅಗರ್ತಲಾ: ನೆರೆಯ ರಾಷ್ಟ್ರಗಳಾದ ಶ್ರೀಲಂಕಾ ಮತ್ತು ನೇಪಾಳದಲ್ಲಿಯೂ ಬಿಜೆಪಿ ಸರ್ಕಾರ ರಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ಲಾನ್ ಮಾಡಿದ್ದರು ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಹೇಳಿದ್ದಾರೆ.
ಅಗರ್ತಲಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ರಾಜ್ಯ ಭೇಟಿಯ ಸಂದರ್ಭದಲ್ಲಿ ನಡೆಸಿದ ಸಭೆಯಲ್ಲಿನ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಈಗಿನ ಕೇಂದ್ರ ಗೃಹ ಸಚಿವರು ನಮ್ಮ ಪಕ್ಷದ ಮುಖ್ಯಸ್ಥರಾಗಿದ್ದಾಗ ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ನೆರೆಯ ಶ್ರೀಲಂಕಾ ಮತ್ತು ನೇಪಾಳ ಬಾಕಿ ಉಳಿದಿದೆ. ಅಲ್ಲಿಯೂ ನಮ್ಮ ಪಕ್ಷವನ್ನು ವಿಸ್ತರಿಸಬೇಕಿದೆ ಎಂದು ಹೇಳಿದ್ದರು. ಅಲ್ಲಿಯೂ ನಾವು ಗೆಲ್ಲಬೇಕಿದೆ ಎಂದು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಬಿಪ್ಲಾಬ್ ಕುಮಾರ್ ದೇಬ್ ತಿಳಿಸಿದ್ದಾರೆ.