alex Certify BIG NEWS: ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಂಗಳೂರು, ಭದ್ರಾವತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು ನಾಳೆ ಬೆಳಗಾವಿ, ಬಾಗಲಕೋಟೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ತಮ್ಮ ಭೇಟಿಯ ಅವಧಿಯಲ್ಲಿ ಸುಮಾರು 12 ಸಭೆ-ಸಮಾರಂಭಗಳಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾ ಅವರ ಕಾರ್ಯಕ್ರಮಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಭದ್ರಾವತಿಯಲ್ಲಿ ಆರ್.ಎ.ಎಫ್. ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಧಾನಸೌಧದಲ್ಲಿ ಗೃಹ ಇಲಾಖೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಅವರಿಗೆ ಅದ್ದೂರಿ ಸ್ವಾಗತ ನೀಡಲು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಿಜೆಪಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷದ ನಾಯಕರು ಅಮಿತ್ ಶಾ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಖಾತೆ ಹಂಚಿಕೆ, ಉಪ ಚುನಾವಣೆ, ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಮಿತ್ ಶಾ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...