ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಡಿಸೆಂಬರ್ 29 ರಿಂದ 31 ರವರೆಗೆ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಡಿಸೆಂಬರ್ 29ರಂದು ರಾತ್ರಿ 10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಯಲಹಂಕ ವಾಯು ನೆಲೆಗೆ ಆಗಮಿಸಲಿರುವ ಅಮಿತ್ ಶಾ, ಡಿಸೆಂಬರ್ 29ರಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿಸೆಂಬರ್ 30ರಂದು ಮಧ್ಯಾಹ್ನದವರೆಗೆ ಸಮಯ ಕಾಯ್ದಿರಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.15 ರವರೆಗೆ ಅವರು ಸಮಯ ಕಾಯ್ದಿರಿಸಿದ್ದು, ಈ ಅವಧಿಯಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.