ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸುತ್ತೂರು ಜಾತ್ರೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅತಿಥಿ ಗೃಹ ಉದ್ಘಾಟನೆ ನೆರವೇರಿಸಲಿದ್ದಾರೆ.
ತಮ್ಮ ಭೇಟಿಯ ಸಂದರ್ಭದಲ್ಲಿ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಅಲ್ಲದೆ, ಲೋಕಸಭೆ ಚುನಾವಣೆಯ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಸ್ಥಾನಗಳ ಹಂಚಿಕೆ, ಪಕ್ಷದಲ್ಲಿನ ಆಂತರಿಕ ಶಮನ ಯತ್ನ ಮಾಡುವ ಸಾಧ್ಯತೆ ಇದೆ.