ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳಿಂದ ಇಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ.
ಸಂಸತ್ ನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ದೇಶದ ವಿವಿಧೆಡೆಯೂ ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ.
ಬಂದ್ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ಡಿಡಿಪಿಐ ಸೂರ್ಯಕಾಂತ್ ರಜೆ ಘೋಷಣೆ ಮಾಡಿದ್ದಾರೆ. ಅಲ್ಲದೆ ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸುವಂತೆ ಕೋರಲಾಗಿದೆ.