
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಅಪಸ್ವರ, ಬಂಡಾಯವನ್ನು ಶಮನ ಮಾಡಿದ ಅಮಿತ್ ಶಾ ಶಿವಮೊಗ್ಗದಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ದೆಹಲಿಗೆ ಬರುವಂತೆ ಬಲಾವ್ ನೀಡಿದ್ದಾರೆ.
ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ, ಈಶ್ವರಪ್ಪ ಅವರಿಗೆ ಕರೆ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ತೀರ್ಮಾನ ಕೈಬಿಡುವಂತೆ ತಿಳಿಸಿದ್ದಾರೆ.
ಬುಧವಾರ ಖುದ್ದಾಗಿ ಭೇಟಿಯಾಗಲು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದು, ಅವರ ಸೂಚನೆಯಂತೆ ಈಶ್ವರಪ್ಪ ದೆಹಲಿಗೆ ತೆರಳಿದ್ದಾರೆ. ಶಿವಮೊಗ್ಗದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ದೆಹಲಿಗೆ ಬರುವಂತೆ ಅಮಿತ್ ಶಾ ಕರೆ ಮಾಡಿ ಸೂಚಿಸಿದ್ದಾರೆ. ಪಕ್ಷದ ಹಿರಿಯ ನಾಯಕರ ಸೂಚನೆಯನ್ನು ಪಾಲಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸುವುದಾದರೆ ಸ್ಪರ್ಧೆಯಿಂದ ಹಿಂದೆ ಸರಿಯುದಾಗಿ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.