ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ನವದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಅಮಿತ್ ಶಾನಿವಾಸಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ, ಗ್ರಾಮಾಂತರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವ ವಿಚಾರ ಮತ್ತು ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಸಮಾಲೋಚನೆ ನಡೆಸಿದ್ದಾರೆ.
ರಾಜ್ಯಕ್ಕೆ ಜನವರಿ 16, 17 ರಂದು ಅಮಿತ್ ಶಾ ಭೇಟಿ ನೀಡಲಿದ್ದು, ಈ ವಿಚಾರವಾಗಿಯೂ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.