ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದು, ಈ ನಡುವೆ ಅಮಿತ್ ಶಾ ಸ್ವಾಗತಿಸುವ ವಿಚಾರವಾಗಿ ಬಿಜೆಪಿ ನಾಯಕರಲ್ಲಿಯೇ ವಾಕ್ಸಮರ ನಡೆದಿದೆ.
ಅಮಿತ್ ಶಾ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್ ನಾಯಕರ ಲೈನ್ ಅಪ್ ಮಾಡಲಾಗಿತ್ತು. ಈ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.
ಕ್ಲಸ್ಟರ್ ನಾಯಕರ ಲೈನ್ ಅಪ್ ಉಸ್ತುವಾರಿಯನ್ನು ಮಾಜಿ ಶಾಸಕ ಪ್ರೀತಂ ಗೌಡ ಹೊತ್ತುಕೊಂಡಿದ್ದರು. ಈ ವೇಳೆ ಸಂಸದ ಪ್ರತಾಪ್ ಸಿಂಹ ಹಾಗೂ ಮತ್ತಿತರರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮನ್ನು ಸೇರಿದಂತೆ ಮೈಸೂರಿನ ಕ್ಲಸ್ಟರ್ ನ ಪ್ರಮುಖ ನಾಯಕರನ್ನು ಪಟ್ಟಿಯಲ್ಲಿ ಸೇರಿಸಿಕೊಳ್ಳದ ವಿಚಾರವಾಗಿ ನಿರ್ಲಕ್ಷ್ಯ ತೋರಿದ್ದಕ್ಕೆ ಪ್ರತಾಪ್ ಸಿಂಹ ನೇರವಾಗಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಾನು ಮಾಡಿದ್ದೇ ಸರಿ ಎಂಬ ರೀತಿಯಲ್ಲಿ ಪ್ರೀತಂ ಗೌಡ ಉತ್ತರಿಸಿದ್ದಾರೆ. ಈ ನಡುವೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ತಕ್ಷಣ ಇತರ ಬಿಜೆಪಿ ನಾಯಕರು ಮಧ್ಯಪ್ರವೇಶ ಮಾಡಿ ಸಮಾಧಾನ ಪಡಿಸಿದ್ದಾರೆ ಎಂದು ತಿಳಿದುಬಂದಿದೆ.