
ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪಾಲ್ ಪ್ರಾಸಿಕ್ಯೂಷನ್ ಗೆ ಸರ್ಕಾರ ಅನುಮತಿ ನೀಡಿದೆ.
ಪಿಎಸ್ಐ ಹುದ್ದೆಗಳ ನೇಮಕಾತಿ ಉಸ್ತುವಾರಿಯಾಗಿದ್ದ ಅಮೃತ್ ಪಾಲ್ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಅವರ ಬಳಿ ಸೇಫ್ ಲಾಕರ್ ಕೀ ಇತ್ತು. ಅದನ್ನು ಕಿರಿಯ ಅಧಿಕಾರಿಗಳಿಗೆ ನೀಡಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಜುಲೈ 4 ರಂದು ಸಿಐಡಿ ಅಧಿಕಾರಿಗಳು ಅಮೃತ್ ಪಾಲ್ ಅವರನ್ನು ಬಂಧಿಸಿದ್ದರು.