
ಕಳ್ಳನನ್ನು ಪೊಲೀಸರಿಗೆ ಒಪ್ಪಿಸುವ ಬದಲು ಅಂಗಡಿಯವನು ಸ್ವತಃ ಪರಿಸ್ಥಿತಿಯನ್ನು ನಿಭಾಯಿಸಲು ನಿರ್ಧರಿಸಿದ. ಕಳ್ಳನ ಮೇಲೆ ತೀವ್ರವಾಗಿ ಹಲ್ಲೆ ಮಾಡಿ ಗಾಯಗೊಳಿಸಿದ್ದಾನೆ. ಸೆಪ್ಟೆಂಬರ್ 3 ರಂದು ಹೊರಬಿದ್ದ ವೀಡಿಯೊದಲ್ಲಿ ಅಂಗಡಿಯವನು ಕಳ್ಳನ ಮೇಲೆ ಕ್ರೂರವಾಗಿ ಹಲ್ಲೆ ಮಾಡುವುದನ್ನು ತೋರಿಸುತ್ತದೆ.
ಹಲ್ಲೆ ವೇಳೆ ಸಾರ್ವಜನಿಕರು ಮಧ್ಯಪ್ರವೇಶಿಸಿ ಹಿಂಸಾಚಾರವನ್ನು ತಡೆಯಲು ಪ್ರಯತ್ನಿಸಿದರು. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳನ ಮೇಲೆ ಅಂಗಡಿಯವನು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಬಗ್ಗೆ ಪರ- ವಿರೋಧ ಚರ್ಚೆ ನಡೆಯುತ್ತಿದೆ.