ಇತ್ತೀಚಿನ ದಿನಗಳಲ್ಲಿ ಯುವ ಜನತೆ ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಆರೋಗ್ಯವಂತವಾಗಿರುವವರು ನೋಡನೋಡುತ್ತಿದ್ದಂತೆ ಕುಸಿದು ಬಿದ್ದು ಸಾವಿಗೀಡಾದ ಹಲವು ವಿಡಿಯೋಗಳು ಈಗಾಗಲೇ ವೈರಲ್ ಆಗಿದ್ದು, ಇದಕ್ಕೆ ಈಗ ಮತ್ತೊಂದು ಸೇರ್ಪಡೆಯಾಗಿದೆ.
ವಿಜಯಪುರ ಜಿಲ್ಲೆ ಕೋಟ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಟಕದಲ್ಲಿ ಪಾತ್ರ ಮಾಡುತ್ತಿದ್ದ ಶರಣು ಬಾಗಲಕೋಟೆ ಎಂಬ ಹಾಸ್ಯ ಕಲಾವಿದ ಪ್ರದರ್ಶನದ ವೇಳೆ ವೇದಿಕೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಹಾಸ್ಯ ಕಲಾವಿದ ಶರಣು ಬಾಗಲಕೋಟೆ, ಸಹ ಕಲಾವಿದೆ ಜೊತೆ ನಾಟಕ ಪ್ರದರ್ಶನ ಮಾಡುವಾಗ ಮೈಕ್ ಬಳಿ ಬಂದಿದ್ದು, ಇದ್ದಕ್ಕಿದ್ದಂತೆ ಕುಸಿದಿದ್ದಾರೆ. ಕೂಡಲೇ ಅವರ ಬಳಿ ಧಾವಿಸಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರೊಳಗಾಗಿ ಸಾವಿಗೀಡಾಗಿದ್ದರು ಎನ್ನಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
https://www.youtube.com/shorts/8YDcgKVLlPk