ನವದೆಹಲಿ: ಕಣಿ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.5 ರಷ್ಟು ದಾಖಲಾಗಿದೆ.
ಬೆಳಗಿನ ಜಾವ 4.56 ಗಂಟೆಗೆ 3.5 ರಷ್ಟು ತೀವ್ರತೆಯ ಕಂಪನವಾಗಿದೆ ಎಂದು ಭೂಕಂಪದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಒಂದೆರಡು ಸೆಕೆಂಡ್ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.