ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿಸ್ತರಣಾ ಚಟುವಟಿಕೆ ಕಾರ್ಯಕ್ರಮದಡಿ ಸೆಪ್ಟಂಬರ್ 28 ರಿಂದ ಆಕ್ಟೋಬರ್ 10 ರವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲಾ, ಕಾಲೇಜುಗಳು, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿಜನ್ಯ ರೋಗಗಳ ಅರಿವು ಕಾರ್ಯಕ್ರಮ ಮತ್ತು ಉಚಿತ ಹುಚ್ಚುನಾಯಿ ರೋಗ (ರೇಬೀಸ್) ಲಸಿಕಾ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು, ಪ್ರಾಣಿ ಪ್ರಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಸಂಪೂರ್ಣ ರೇಬೀಸ್ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ. ಚಂದ್ರಶೇಖರ ಎಸ್. ಸುಂಕದ್ ತಿಳಿಸಿದ್ದಾರೆ.