ಬೆಂಗಳೂರು : ಜೂನ್ 28 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಕೊಠಡಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ವಿಧಾನಮಂಡಲ ಅಧಿವೇಶನ ಹಾಗೂ ಬಜೆಟ್ ಹಿನ್ನೆಲೆ ಸಚಿವ ಸಂಪುಟ ಸಭೆ ಬಹಳ ಮಹತ್ವ ಪಡೆದಿದೆ.
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಜಟಾಪಟಿ ನಡೆಯುತ್ತಿದ್ದು, ಇದರ ನಡುವೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಐದು ಪಂಚ ಗ್ಯಾರಂಟಿ ಯೋಜನೆಗಳ ಸಂಬಂಧ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.